ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಂದುವರಿದ ರೈತ ಸಂಘದ ಪ್ರತಿಭಟನೆ

12 HVR 6
Published on

ಹಾವೇರಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ಗುರುವಾರ ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ರೈತರು ಭಾಗವಹಿಸಿದ್ದರು. ಪ್ರತಿಭಟನೆಗೆ ಜಿಲ್ಲಾ ವಕೀಲರ ಸಂಘ ಬೆಂಬಲ ಸೂಚಿಸಿತು. ಪ್ರತಿಭಟನಾ ಸ್ಥಳಕ್ಕೆ ಸಂಘದ ಪದಾಧಿಕಾರಿಗಳಾದ ವಿ.ಎಸ್.ಹೆಬ್ಬಾಳ. ಸಿ.ಪಿ.ಜಾವಗಲ್ಲ, ಎಚ್.ಸಿ.ಸಿದ್ದನಗೌಡ್ರ, ಎಂ.ವಿ.ಕುಂಠೆ, ಇತರರು ಇತರರು ಆಗಮಿಸಿ ಸಹಕಾರ ನೀಡಿದರು.

ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಅಡಿವೆಪ್ಪ ಆಲದಕಟ್ಟಿ. ಶಿವಯೋಗಿ ಹೊಸಗೌಡ್ರ, ಜಾನ್ ಪುನೀತ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ, ಬಸವರಾಜ ಕಡೂರ, ಲೋಕೇಶ ಸುತಾರ, ಸುರೇಶ ಧುಳೇಹೊಳೆ, ರಮೇಶ ಮೂಲಿಮನಿ, ಜಟ್ಟೆಪ್ಪ ಕನ್ನಪ್ಪನವರ, ಆನಂದಪ್ಪ ಬಣಕಾರ, ಸಂಜೀವ ಬಾತಿ, ಸೇರಿದಂತೆ ಇತರರಿದ್ದರು.

ಸಿಎಂ ಜತೆ ಚರ್ಚೆ ಭರವಸೆ

ಬುಧವಾರ ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹಾಗೂ ಗ್ಯಾರಂಟಿ ಯೋಜನೆಗಳ ಸಮಿತಿಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಆಗಮಿಸಿ ರೈತರ ಅಹವಾಲು ಸ್ವೀಕರಿಸಿದರು. ಶೀಘ್ರವೇ ನಿಮ್ಮ ಬೇಡಿಕೆಗಳ ಈಡೇರಿಕೆಯ ಕುರಿತು ಉಸ್ತುವಾರಿ ಸಚಿವ, ಕೃಷಿ, ಇಂಧನ ಸಚಿವರು ಹಾಗೂ ಮುಖ್ಯಮಂತ್ರಿಯವರ ಜತೆಗೆ ಚರ್ಚಿಸಿ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net