ಬೈಕ್ ಅಡ್ಡಗಟ್ಟಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೆ ಚಾಕು ಇರಿತ..

Stabbing
Published on

ಹಾವೇರಿ: ಬೈಕ್ ಅಡ್ಡಗಟ್ಟಿ ಎಸ್ ಬಿ ಐ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೆ ಅಪರಿಚಿತರು ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಇಲ್ಲಿ‌ನ ಹಾವೇರಿ- ದೇವಗಿರಿ ಡಿಸಿ ಕಚೇರಿ ರಸ್ತೆಯಲ್ಲಿ ನಡೆದಿದೆ.‌

ಜಯರಾಮ ಕೊಲ್ಲಾಪೂರ (೫೮) ಚಾಕು ಇರಿತಕ್ಕೀಡಾದವರು.

ಜಯರಾಮ ಮಗನ ಜತೆಗೆ ಬೈಕ್ ನಲ್ಲಿ ಡಿಸಿ ಕಚೇರಿ ಕಡೆಗೆ ಹೊರಟಿದ್ದರು. ಈ ವೇಳೆ ಎರಡು ಬೈಕ್ ನಲ್ಲಿ ಬಂದ ನಾಲ್ವರು ಅಪರಿಚಿತರು ಬೈಕ್ ಅಡ್ಡಗಟ್ಟಿದ್ದಾರೆ. ಜಯರಾಮ ಬೆನ್ನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಚಾಕುವಿನಿಂದ ಮೂರು ಬಾರಿ ಇರಿದು ಕೊಲೆಗೆ ಪ್ರಯತ್ನಿಸಿದ್ದಾರೆ.

ಗಾಯಾಳುವನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net