ಮದ್ಯಪಾನ, ಮಾರಾಟ ನಿಷೇಧ

Published on

ಹಾವೇರಿ: ಮೇ 13ರಂದು ಮತ ಎಣಿಕೆ ನಡೆಯುವುದರಿಂದ ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಶೇಖರಣೆ, ಮದ್ಯಪಾನ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10(ಬಿ) ಅನ್ವಯ ಮದ್ಯ ಮಾರಾಟ ಮತ್ತು ಮದ್ಯಪಾನ ನಿಷೇಧಮಾಡಲಾಗಿದೆ. ಈ ಅವಧಿಯಲ್ಲಿ ಬಿಯರ್ ಬಾರ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಲು ಆದೇಶಿಸಲಾಗಿದೆ. ಈ ಸಮಯವನ್ನು ಶುಷ್ಕ ದಿನಗಳೆಂದು ಘೋಷಿಸಲಾಗಿದೆ. ಲೈಸನ್ಸ್‌ದಾರರು ಯಾವುದೇ ಪರಿಹಾರಕ್ಕೂ ಅರ್ಹರಿವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net