ಅಧಿಕಾರಿಗಳು ಕೇಂದ್ರ ಸ್ಥಾನ ತೊರಯುವಂತಿಲ್ಲ; ತುರ್ತು ರಜೆ ಬೇಕಾದಲ್ಲಿ ಪೂರ್ವಾನುಮತಿ ಕಡ್ಡಾಯ, ಡಿಸಿ ಆದೇಶ

Published on

ಹಾವೇರಿ: ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ರಜೆಯಮೇಲೆ ತೆರಳಲು ಮತ್ತು ಕೇಂದ್ರಸ್ಥಾನ ಬಿಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಆಯಾ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಸೇವೆಗಳನ್ನು ನಿಗದಿತ ಅವಧಿಯೊಳಗೆ ಒದಗಿಸುವ ಸಲುವಾಗಿ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ರಜೆಯ ಮೇಲೆ ತೆರಳಲು ಮತ್ತು ಕೇಂದ್ರಸ್ಥಾನ ಬಿಡಲು ನಿರ್ಬಂಧ ವಿಧಿಸಲಾಗಿದೆ. ಇನ್ನಾವುದೇ ತುರ್ತು ಪ್ರಸಂಗಗಳಲ್ಲಿ ರಜೆಯ ಮೇಲೆ ತೆರಳುವ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಯವರಿಂದ ಪೂರ್ವಾನುಮತಿ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net