ಕೂಡಲೇ ಕಾಳಜಿ ಕೇಂದ್ರಕ್ಕೆ ರವಾನಿಸಿ; ಬೀಳುವ ಮನೆ, ನದಿಪಾತ್ರದ ಜನರನ್ನು ಗುರುತಿಸಿ

27 HVR 2 B
Published on

ಹಾವೇರಿ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಥಿಲಗೊಂಡ ಮನೆಗಳಲ್ಲಿ ವಾಸವಾಗಿರುವ ಹಾಗೂ ನದಿ ಪಾತ್ರದಲ್ಲಿ ವಾಸವಿರುವ ಜನರನ್ನು ತುರ್ತಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶಿಸಿದ್ದಾರೆ.
ನಿರಂತರ ಮಳೆಯಿಂದಾಗಿ ಜಿಲ್ಲೆಯ ಅನೇಕ ನದಿ, ಕೆರೆ, ಹಳ್ಳ, ಕೊಳ್ಳ, ಬ್ಯಾರೇಜ್‌ಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ. ಹಾಗಾಗಿ, ಸುರಕ್ಷತೆಯ ದೃಷ್ಟಿಯಿಂದ ಎಲ್ಲ ಗ್ರಾಮಗಳಲ್ಲಿ ಗ್ರಾಮ ಆಡಳಿತಾಧಿಕಾರಿ, ಪಿಡಿಒಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅಂಡರ್ ಪಾಸ್‌ಗಳಲ್ಲಿ ನೀರು ಶೇಖರಣೆಯಾಗುವ ಸ್ಥಳಗಳಲ್ಲಿ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net