ಹಾವೇರಿ: ಲೋಕಸಭಾ ಚುನಾವಣೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಮೇ 7ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
ಯಾ ಮತಕ್ಷೇತ್ರಗಳ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕ್ಷಿಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ವಿವಿಧ ಸಂಘ- ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ, ಬ್ಯಾಂಕು, ಮುಂತಾದ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔಧ್ಯಮಿಕ ಸಂಸ್ಥೆಗಳು ಮತ್ತಿತರ ಕ್ಷಿಂಸ್ಥೆಗಳಲ್ಲಿ ಖಾಯಂ ಹಾಗೂ ದಿನಗೂಲಿ ನೌಕರರು ವೇತನ ಸಹಿತ ರಜೆಗೆ ಅರ್ಹರಾಗಿರುತ್ತಾರೆ.
ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಈ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆ ಹಾಗೂ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ನೌಕರರೆಲ್ಲರೂ ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.