

ಹಾವೇರಿ: ಜಿಲ್ಲೆಯ ಪ್ರಮುಖ ಬೆಳೆ ಮೆಕ್ಕೆಜೋಳ ಸಂಪೂರ್ಣವಾಗಿ ಒಣಗಿ ಹೋಗಿದ್ದು ಸರ್ಕಾರ ಈ ಕೂಡಲೇ ಹಸಿ ಬರಗಾಲ ಎಂದು ಘೋಷಿಸಬೇಕು. ರೈತರಿಗೆ ಸೂಕ್ತ ಪರಿಹಾರ ಕೊಡಬೇಕು. ಬೆಳೆ ಹಾನಿಗೀಡಾದ ರೈತರಿಗೆ ಈ ಕೂಡಲೇ ಶೇ.25ರಷ್ಟು ಮಧ್ಯಂತರ ಬೆಳೆ ಪರಿಹಾರ ಕೊಡಬೇಕು. ಬಾಕಿ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಹಾವೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಗಂಗಣ್ಣ ಎಲಿ, ಶಂಕರಗೌಡ ಶಿರಗಂಬಿ, ಮರಿಗೌಡ ಪಾಟೀಲ, ಸುರೇಶ ಹೊನ್ನಪ್ಪಳವರ, ಪ್ರಭುಗೌಡ ಪ್ಯಾಟಿ, ದಿಳ್ಳೆಪ್ಪ ಮಣ್ಣೂರ, ಇತರರಿದ್ದರು.