ಮತದಾರರ ಜಾಗೃತಿ ಬೈಕ್ ರ್ಯಾಲಿಗೆ ಡಿಸಿ ಚಾಲನೆ

30 HVR 9 B
Published on

ಹಾವೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಇಲ್ಲಿನ ಜಿಲ್ಲಾಡಳಿತ ಕಚೇರಿ ಬಳಿ ಶನಿವಾರ ಆಯೋಜಿಸಿದ್ದ ಮತದಾರರ ಜಾಗೃತಿ ಮೂಡಿಸುವ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಚಾಲನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ನಗರದ ಹೈಸ್ಕೂಲ್ ರಸ್ತೆ, ಸುಭಾಸ್ ವೃತ್ತ, ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾರರರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ರ್ಯಾಲಿ ವೇಳೆ ಮತದಾನ ಮಹ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಜಿ.ಪಂ.ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net