ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸೆ.26ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಸೆ.26ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಜರುಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ, ಇತರರು ಭಾಗವಹಿಸುವರು. ಗೊಟಗೋಡಿಯ ಕರ್ನಾಟಕ ಜಾನಪದ ವಿವಿ ಪ್ರವಾಸೋದ್ಯಮ ವಿಭಾಗದ ಬಂಡು ಸುರೇಶ ಕೆಂಪವಾಡೆ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net