ನದಿಪಾತ್ರದ ಗ್ರಾಮಗಳಿಗೆ ಡಿಸಿ ಭೇಟಿ, ಪರಿಶೀಲನೆ

23 HVR 2 D
Published on

ಹಾವೇರಿ: ತಾಲೂಕಿನ ವರದಾ ನದಿ ಪಾತ್ರದ ಹೊಸರಿತ್ತಿ, ಬೆಳವಿಗಿ ಹಾಗೂ ಹಾಲಗಿಮರೋಳ ಗ್ರಾಮಗಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಂಗಳವಾರ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಹೊಸರಿತ್ತಿ ಗ್ರಾಮದ ವರದಾ ನದಿ ಪಾತ್ರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಯವರ ಮಠಕ್ಕೆ ಭೇಟಿ ನೀಡಿ ಮಠದ ಸುತ್ತ ನದಿ ನೀರಿನಿಂದ ಜಲಾವೃತವಾಗಿರುವುದನ್ನು ವೀಕ್ಷಿಸಿದರು. ಬೆಳವಿಗಿ ಮತ್ತು ಹಾಲಗಿ ಗ್ರಾಮಗಳಲ್ಲಿ ನದಿಪಾತ್ರದಲ್ಲಿ ನೀರಿನ ಹರಿವು ಕುರಿತು ಪರಿಶೀಲನೆ ನಡೆಸಿದರು. ಸೇತುವೆ ಬಳಿ ತೆರಳಿ ರೈತರ ಜಮೀನುಗಳಿಗೆ ನೀರು ನುಗ್ಗಿದ ಬಗ್ಗೆ ಅಧಿಕಾರಿಗಳಿಂದ ಮಾಹಿತ ಪಡೆದರು.
ಪ್ರವಾಹ ಹೆಚ್ಚಳವಾದಲ್ಲಿ ಸಂಭವಿಸಬಹುದಾದ ಅನಾಹುತಗಳ ತಡೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ, ತಹಸೀಲ್ದಾರ ಶಂಕರ ಜಿ. ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ ಹೆಗಡೆ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net