ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ, ಪರಿಶೀಲನೆ

5 HVR 6 A
Published on

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಯಲವಿಗಿಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗೆ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ, ವಾಹನ ತಪಾಸಣೆ ಕಾರ್ಯ ಪರಿಶೀಲನೆ ನಡೆಸಿದರು.

ಕಡ್ಡಾಯವಾಗಿ ಎಲ್ಲ ವಾಹನಗಳ ತಪಾಸಣೆ ನಡೆಸಬೇಕು ಎಂದು ಚೆಕ್‌ಪೋಸ್ಟ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ನಂತರ ಸವಣೂರಿನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಘನತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net