ಹಾನಗಲ್ಲ ತಹಸೀಲ್ದಾರ್ ಕಚೇರಿಗೆ ಡಿಸಿ ಭೇಟಿ; ಸಮಯಕ್ಕೆ ಸರಿಯಾಗಿ ಆಫೀಸ್‌ಗೆ ಬರುವಂತೆ ಸಿಬ್ಬಂದಿಗೆ ಸೂಚನೆ

24 HVR 8
Published on

ಹಾನಗಲ್ಲ: ಇಲ್ಲಿನ ತಹಸೀಲ್ದಾರ್ ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ, ಪರಿಶೀಲಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.

ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಕಂದಾಯ ಗ್ರಾಮ ಹಕ್ಕು ಪತ್ರ ವಿತರಣೆಗೆ ಸಂಬಂಧಪಟ್ಟಂತೆ ಹಕ್ಕುದಾರಾರಿಗೆ ನ್ಯಾಯಯುತವಾಗಿ ತಲುಪಬೇಕು. ಸಿಬ್ಬಂದಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಕಾಲಕ್ಕೆ ವಹಿಸಿರುವ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಬೇಕು. ಜನರನ್ನು ಪದೆಪದೇ ಕಚೇರಿಗೆ ಅಲೆಯುವಂತೆ ಮಾಡಬಾರದು. ನಿಮ್ಮ ಕೆಲಸವು ಸಾರ್ವಜನಿಕರನ್ನು ಮೆಚ್ಚಿಸುವಂತಾಗಬೇಕು ಎಂದು ಸಲಹೆ ನೀಡಿದರು.

ಮಳೆಗಾಲ ಆರಂಭವಾಗಿದ್ದು, ಮಳೆಯಿಂದ ಸಾರ್ವಜನಿಕ ಆಸ್ತಿಗಳಿಗೆ ದಕ್ಕೆ ಉಂಟಾದಲ್ಲಿ ತುರ್ತು ಭೇಟಿ ಕೊಟ್ಟು ಪರಿಹಾರ ಒದಗಿಸಬೇಕು. ಜನರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು ಎಲ್ಲರೂ ಜಾಗೃತರಾಗಿ ಕೆಲಸ ಮಾಡಬೇಕು ಎಂದರು.

ತಹಸೀಲ್ದಾರ್ ರೇಣುಕಾ, ಇತರ ಅಧಿಕಾರಿ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net