ಮೆಡಿಕಲ್ ಕಾಲೇಜ್ ಕಾಮಗಾರಿ ವೀಕ್ಷಿಸಿದ ಡಿಸಿ

10 HVR 4
Published on

ಹಾವೇರಿ: ಜಿಲ್ಲಾಧಿಕಾರಿ ರಘುನಂದನ ಮೂರ್ತಿ ನಗರದ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ವೈದ್ಯಕೀಯ ಕಾಲೇಜ್ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಡಿಸಿ, ಕಾಮಗಾರಿಯ ವಿವಿಧ ಹಂತಗಳ ಪ್ರಗತಿಯ ಕುರಿತಂತೆ ಇಂಜನೀಯರ್‌ಗಳಿಂದ ಮಾಹಿತಿ ಪಡೆದುಕೊಂಡರು. ಕಟ್ಟಡ ಕಾಮಗಾರಿ, ವಿದ್ಯುತ್ ಸಂಪರ್ಕ, ಲ್ಯಾಬ್, ತರಗತಿ ಕೊಠಡಿಗಳು ಸೇರಿದಂತೆ ವಿವಿಧ ಕಾಮಗಾರಿಗಳ ವಿವರ ಪಡೆದುಕೊಂಡರು.
ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಮೇಲಿನ ಮಹಡಿಯ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ಇಲಾಖೆ ಅಭಿಯಂತರರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ನಿರ್ದೇಶಕ ಡಾ.ವಿಜಯ ಮುಳಗುಂದ, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಾಗರಾಜ, ಆರೋಗ್ಯ ಇಲಾಖೆ ಅಭಿಯಂತರ ಸುರೇಶ, ಇತರ ಅಭಿಯಂತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net