ಸಮೀಕ್ಷೆ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

8 HVR 8
Published on

ಹಾವೇರಿ: ನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿದರು. ಈ ವರೆಗೂ ಗಣತಿ ಸಮೀಕ್ಷೆ ಕಾರ್ಯಕ್ಕೆ ಮಾಹಿತಿ ನೀಡದಿರುವವರು, ಗಣತಿದಾರರು ತಮ್ಮ ಮನೆಗೆ ಬಂದಾಗ ಅಗತ್ಯ ಮಾಹಿತಿ ನೀಡುವಂತೆ ಸೂಚಿಸಿ ಸಮೀಕ್ಷೆ ಕಾರ್ಯದ ಅನುಕೂಲ ಪಡೆದುಕೊಳ್ಳುವಂತೆ ಹೇಳಿದರು. ನಗರಸಭೆ ಪೌರಾಯುಕ್ತ ಎಚ್.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಗಣತಿಯ ಮೇಲ್ವಿಚಾರಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net