ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.14, 15ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಸಹಯೋಗದಲ್ಲಿ ನಗರದಲ್ಲಿ ಸೆ.14 ಹಾಗೂ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ.

ಸೆ.14ರಂದು ಬೆಳಗ್ಗೆ 8 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಿಂದ ಬೆಂಗಳೂರಿನಲ್ಲಿ ಜರುಗುತ್ತಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ತೆರಳುತ್ತಿರುವ ಬೈಕ್ ರ‌್ಯಾಲಿಗೆ ಚಾಲನೆ ನೀಡಲಾಗುವುದು. ಸೆ.15ರಂದು ಬೆಳಗ್ಗೆ 8 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಗುವುದು. ಬಳಿಕ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net