ಸರ್ಕಾರ ಎಡವಿದರೆ ಸರಿಪಡಿಸುವೆ; ನೂತನ ಉಪ ಸಭಾಪತಿ ರುದ್ರಪ್ಪ ಲಮಾಣಿ

Rudrappa Lamani B
Published on

ಹಾವೇರಿ: ವಿಧಾನಸಭೆಯ 25ನೇ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆಗಳು. ಉಪಾಧ್ಯಕ್ಷನಾಗಿ ನನಗೆ ಸಾಕಷ್ಟು ಜವಾಬ್ದಾರಿ ಇದೆ. ಸರ್ಕಾರ ಎಡವಿದರೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತೇನೆ ಎಂದು ಉಪ ಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
ಉಪ ಸಭಾಪತಿ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಬಾರಿಗೆ ಶನಿವಾರ ನಗರದಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಳಮಟ್ಟದಿಂದ ಬಂದ ನನ್ನನ್ನು ಇವತ್ತು ಈ ಸ್ಥಾನದಲ್ಲಿ ಕೂರಿಸಿದ್ದಾರೆ. ಸಚಿವನಾಗದಿದ್ದರೂ ಎಲ್ಲ ಸಚಿವರಿಗೂ ಆದೇಶ ಮಾಡುವ ಜವಾಬ್ದಾರಿ ನನಗೆ ಸಿಕ್ಕಿದೆ. ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರಿಗೆ ಹೆಚ್ಚಿನ ಅವಕಾಶ ನೀಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net