ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರವಾಸ

Rudrappa Lamani
Published on

ಹಾವೇರಿ: ವಿಧಾನಸಭೆ ಉಪ ಸಭಾಪತಿ, ಶಾಸಕ ರುದ್ರಪ್ಪ ಲಮಾಣಿ ಜು.15 ಹಾಗೂ 16ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜು.15ರಂದು ನಗರದಲ್ಲಿ ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸುವರು. ಜು.16ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಿಂದ ಆಯೋಜಿಸಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಬಂಕಾಪುರ ಪಟ್ಟಣದ ದೇಸಾಯಿ ಪ್ಲಾಟ್‌ನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ ಜಿ ಪ್ಲಸ್ 1 ಮಾದರಿ ಮನೆಗಳ ಸಮುಚ್ಛಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಹಾವೇರಿ ತಾಲೂಕು ಕೊರಡೂರ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು. ಮಧ್ಯಾಹ್ನ 2.15ಕ್ಕೆ ಹೊಸರಿತ್ತಿ ಗ್ರಾಮಕ್ಕೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net