ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ 30 ದಿನಗಳ ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ತರಬೇತಿ ಅ.25ರಿಂದ ನವೆಂಬರ್ 23ರವರೆಗೆ ನಡೆಯಲಿದೆ. ಊಟ, ವಸತಿಯೊಂದಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು. ಮೊಬೈಲ್‌ನ ವಿಧಗಳು, ಡ್ಯೂಯೆಲ್ ಸಿಮ್, ಹ್ಯಾಂಡಸೆಟ್, ಸ್ಮಾರ್ಟ್ ಫೋನ್‌ಗಳ ನೆಟ್‌ವರ್ಕ್ ಮಾಹಿತಿ, ಮೊಬೈಲ್ ಬಿಡಿ ಭಾಗಗಳ ಮಾಹಿತಿ, ರಚನೆ, ಇನ್ನಿತರ ಮಾಹಿತಿ ಜತೆಗೆ ಚಾರ್ಜಿಂಗ್ ಸಮಸ್ಯೆ, ಬ್ಯಾಟರಿ ಸಮಸ್ಯೆ, ಡಿಸಪ್ಲೇ ಸಮಸ್ಯೆ, ನೆಟ್‌ವರ್ಕ್ ಸಮಸ್ಯೆ ಸರಿಪಡಿಸುವ ಕುರಿತು ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಶನ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಡಿ.ಸಿ.ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net