ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ

2 HVR 10
Published on

ಹಾವೇರಿ: ಇಲ್ಲಿನ ದೇವಗಿರಿಯ ಜಿಲ್ಲಾಡಳಿತ ಕಚೇರಿ ಎದುರು ಶುಕ್ರವಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಮಾಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟಿಸಲಾಯಿತು.

ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದ ಒಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಒಳ ಮೀಸಲಾತಿಯ ಬೇಡಿಕೆ ಈಡೇರಿಕೆಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಶೀಘ್ರವಾಗಿ ಒಳಮೀಸಲಾತಿ ಮಾಡಬೇಕು ಎಂದು ಒತ್ತಾಯಿಸಿದರು.

ಲಿಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಮಾತನಾಡಿ, ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ.ನಮಗೆ ಆಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಆ.15ರೊಳಗೆ ಜಾರಿಗೊಳಿಸಬೇಕು ಎಂದರು.

ಪ್ರಮುಖರಾದ ಪರಮೇಶಪ್ಪ ಮೇಗಳಮನಿ, ಉಡಚಪ್ಪ ಮಾಳಗಿ, ನಾಗರಾಜ ಮಾಳಗಿ, ಹೊನ್ನಪ್ಪ ತಗಡಿನಮನಿ, ನೀಲಕಂಠಪ್ಪ ಕುಸನೂರ, ಪ್ರಕಾಶ ಪೂಜಾರ, ಅಶೋಕ ಮರೆಣ್ಣನವರ, ತಿರಕಪ್ಪ ಚಿಕ್ಕೇರಿ, ಬಿ.ಆರ್.ಪುಟ್ಟಣ್ಣನವರ, ಸುಭಾಷ ಬೆಂಗಳೂರು, ಸಂತೋಷ ಗುಡ್ಡಪ್ಪನವರ, ಕರಿಯಪ್ಪ ಕಟ್ಟಿಮನಿ, ಮಲ್ಲೇಶ ಕುನ್ನೂರ, ಸಿ.ಡಿ.ಸುಮಂಗಲಾ, ಗೀತಾ ಒಳಗುಂಡಿ, ಗೀತಾ ಕಡೇಮನಿ, ನೇತ್ರಾ ದೊಡ್ಡಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net