ರಾಷ್ಟ್ರೋತ್ಥಾನ ಶಾಲಾ ಕಟ್ಟಡಕ್ಕೆ ಭೂಮಿಪೂಜೆ ಫೆ.15ರಂದು

Published on

ಹಾವೇರಿ: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ವತಿಯಿಂದ ತಾಲೂಕಿನ ದೇವಿಹೊಸೂರಿನಲ್ಲಿ ನಿರ್ಮಾಣ ಮಾಡುತ್ತಿರುವ ಶಾಲಾ ಕಟ್ಟಡಕ್ಕೆ ಫೆ.15ರಂದು ಬೆಳಗ್ಗೆ 10.30ಕ್ಕೆ ಭೂಮಿಪೂಜೆ ನಡೆಯಲಿದೆ.

ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ, ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಅಗಡಿ ಪ್ರಭುಸ್ವಾಮಿಮಠದ ಗುರುಸಿದ್ದ ಸ್ವಾಮೀಜಿ, ಹರಸೂರು ಬಣ್ಣದಮಠದ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಹೊಸರಿತ್ತಿ ಗುದ್ದಲೀಶ್ವರ ಸ್ವಾಮೀಜಿ, ಅಗಡಿ ಆನಂದವನದ ಗುರುದತ್ತ ಚಕ್ರವರ್ತಿ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ವಿಶ್ವನಾಥ ಚಕ್ರವರ್ತಿ ಸ್ವಾಮೀಜಿ, ಮತ್ತಿತರರು ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು.ರಾಮಣ್ಣ, ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ ಹೆಗ್ಡೆ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net