

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಸ್ಪತ್ರೆ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಮತ್ತು ದಂತ ಭಾಗ್ಯ ಯೋಜನೆ ಹಾಗೂ ದಾವಣಗೆರೆ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಸಹಯೋಗದಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಉಚಿತ ಕೃತಕ ದಂತ ಪಂಕ್ತಿ ವಿತರಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಅವರು 45 ಅರ್ಹ ಫಲಾನುಭವಿಗಳಿಗೆ ದಂತ ಪಂಕ್ತಿಗಳನ್ನು ವಿತರಿಸಿದರು.
ದಂತ ಭಾಗ್ಯ ಯೋಜನೆ ಅನುದಾನ ಕಡಿಮೆಯಾದಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಅನುದಾನ ನೀಡುವುದಾಗಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಎನ್.ಓ.ಎಚ್.ಪಿ. ಕಾರ್ಯಕ್ರವ ಅಧಿಕಾರಿ ಡಾ.ಕಲ್ಪನಾ ಎಂ.ಎಸ್, ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಪರಸಪ್ಪಾ ಚುರ್ಚಿಹಾಳ, ದಾವಣಗೆರೆ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಕೃತಕ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ವಿನಯ ಕುಮಾರ, ಡಾ. ಹೊಂಬೇಶ, ಡಾ.ಶಶಿಧರ, ಡಾ.ಪ್ರವೀಣ, ಡಾ.ಪ್ರಸನ್ನ, ಡಾ.ಕೌಸಲ್ಯಾ, ಡಾ.ಮಾನಸ, ದಂತ ತಂತ್ರಜ್ಞರು, ಇತರರು ಉಪಸ್ಥಿತರಿದ್ದರು.