ಹಾವೇರಿ: ಸೊನ್ನೆಯಿಂದ ಒಂದು ವರ್ಷದೊಳಗಿನ ಮಕ್ಕಳ ಮರಣ ತಡೆಗಟ್ಟುವಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪಾತ್ರ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೇ 26ರಿಂದ 31ರವರೆಗೆ ಹಾಗೂ ಜೂನ್ 23ರಿಂದ 28ರವರೆಗೆ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ವಿಶ್ವ ಲಸಿಕಾವಾರು ಅಭಿಯಾನವನ್ನು ಜಗತ್ತಿನಾದ್ಯಂತ ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನವನು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಲಸಿಕಾಕರಣ ನಡೆಸಿ ಶೂನ್ಯ ಡೋಸ್ ಮಕ್ಕಳು ಮತ್ತು ದಡಾರ ರುಬೆಲ್ಲಾ ಲಸಿಕೆ ತಪ್ಪಿಹೋದ ಮಕ್ಕಳನ್ನು ಅಥವಾ ಇತರೆ ಲಸಿಕೆಯಿಂದ ವಂಚಿತಾದ ಮಕ್ಕಳನ್ನು ಗುರುತಿಸಿ ಲಸಿಕಾಕರಣ ಕೈಗೊಂಡು ಈ ಚಟುವಟಿಕೆಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲಾಗುವುದು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ, ಆಯ್ದು ಗ್ರಾಮಗಳಲ್ಲಿ ಲಸಿಕಾ ಸತ್ರಗಳನ್ನು ಏರ್ಪಡಿಸಿ ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಮಕ್ಕಳ ಪಾಲಕರು ಈ ವಿಶ್ವ ಲಸಿಕಾ ವಾರದ ಸದುಪಯೋಗ ಪಡೆದು ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.