ಜೈನ್ ಪ್ರತಿಭಾ ಪುರಸ್ಕಾರ ಅವಧಿ ವಿಸ್ತರಣೆ

Published on

ಹಾವೇರಿ: ವೀಣಾ ಚಂದ್ರನಾಥ ಕಳಸೂರ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಪಡೆದ ಜಿಲ್ಲೆಯ ದಿಗಂಬರ ಜೈನ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಆಸಕ್ತರು ಸೆ.13ರೊಳಗೆ ಹೆಸರು ನೋಂದಾಯಿಸಲು ಅವಕಾಶವಿದೆ.
ಅರ್ಹ ವಿದ್ಯಾರ್ಥಿಗಳು ಶಾಲಾ-ಕಾಲೇಜಿನ ದೃಢೀಕೃತ ಅಂಕಪಟ್ಟಿ, ದಿಗಂಬರ ಜೈನ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಟ್ರಸ್ಟ್ ಅಧ್ಯಕ್ಷ ಚಂದ್ರನಾಥ ಕಳಸೂರ ಅವರ ಮೊ.ಸಂ. 94499 73757ಗೆ ವಾಟ್ಸ್ ಆ್ಯಪ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ.15ರಂದು ಸಂಜೆ 7 ಗಂಟೆಗೆ ಬಸ್ತಿ ಓಣಿಯ ಶ್ರೀ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ಜರುಗಲಿದೆ ಎಂದು ಟ್ರಸ್ಟ್ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net