ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ 22ರಂದು

Published on

ಹಾವೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೆ.22ರಂದು ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಪುರುಷ ಮತ್ತು ಮಹಿಳಾ ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಸೆ.22ರಂದು ಬೆಳಗ್ಗೆ 10.30ಕ್ಕೆ ಹಾವೇರಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net