ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶ್ರಮದಾನ

30 HVR 8
Published on

ಹಾವೇರಿ: ನಮ್ಮ ಮನೆ, ಕೆಲಸದ ಸ್ಥಳ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸುಂದರ ಮತ್ತು ಸ್ವಚ್ಛ ಪರಿಸರ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಲ್.ಲಕ್ಷ್ಮೀನಾರಾಯಣ ಹೇಳಿದರು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ಮಹಾತ್ಮ ಗಾಂಧೀ ಹುತಾತ್ಮರಾದ ದಿನದ ಪ್ರಯುಕ್ತ ಹುತಾತ್ಮರ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ಕಾಪಾಡಿಕೊಳ್ಳುವ ಮೂಲಕ ಕಾಯಿಲೆಗಳಿಂದ ಮುಕ್ತರಾಗಿ ಜೀವನ ನಡೆಸೋಣ ಎಂದರು.

ಸ್ವಚ್ಛತಾ ಕಾರ್ಯಕ್ರಮದ ನಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಭಜನೆ ಕಾರ್ಯಕ್ರಮ ಜರುಗಿತು. ಕೊನೆಯಲ್ಲಿ ಮೌನಾಚರಣೆ ಆಚರಿಸಲಾಯಿತು.

ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ನಿಂಗೌಡ ಪಾಟೀಲ, ಪ್ರಕಾಶ ವಿ., ಬಿ.ಆರ್.ಮುತಾಲಿಕದೇಸಾಯಿ, ಶೈಲಜಾ ಎಚ್.ವಿ., ರವಿಪ್ರಕಾಶ ಟಿ.ಆವಿನ, ಬಿಪಿನ್ ಎಚ್.ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್ ಜತ್ತಿ, ಕಾರ್ಯದರ್ಶಿ ಪಿ.ಎಸ್ ಹೆಬ್ಬಾಳ, ಶಿರಸ್ತೇದಾರ ಕೆ.ಬೇನಾಳ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ಯಾನಲ್ ವಕೀಲರು ಹಾಗೂ ಅರೆನ್ಯಾಯಿಕ ಸ್ವಯಂ ಸೇವಕರು, ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net