ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.24 ಮತ್ತು 25ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.24 ಮತ್ತು 25ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಸೆ.24ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಎಸ್.ಆರ್.ಪಾಟೀಲ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಎಸ್.ಎಫ್.ಎನ್.ಗಾಜಿಗೌಡ್ರ, ಎಂ.ಎಂ.ಹಿರೇಮಠ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net