

ಹಾವೇರಿ: ತಾಲೂಕು ದೇವಗಿರಿಯ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಗುರುವಾರ ಉದ್ಘಾಟಿಸಿದರು. ಶಾಸಕ ಬಸವರಾಜ ಶಿವಣ್ಣನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಆನಂದಸ್ವಾಮಿ ಗಡ್ಡದೇವರಮಠ, ಇತರರು ಉಪಸ್ಥಿತರಿದ್ದರು.