ಹಾವೇರಿ ಜಿಲ್ಲಾಮಟ್ಟದ ಎಸ್‌ಎಸಿ, ಎಸ್‌ಟಿ ಸಭೆ ಮೇ 24ರಂದು; ತಾಪಂ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜನೆ

Published on

ಹಾವೇರಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮೇ 24ರಂದು ಬೆಳಗ್ಗೆ 11 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಹಮ್ಮಿಕೊಳ್ಳಲಾಗಿದೆ. ಎಸ್‌ಸಿ, ಎಸ್‌ಟಿಯ ಎಲ್ಲ ಪಂಗಡಗಳ ಹಾಗೂ ಸಂಘಟನೆಗಳ ಪ್ರಮುಖರು ಸಭೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಅಂಶುಕುಮಾರ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net