ಅಂಚೆ ಕಚೇರಿ, ಬ್ಯಾಂಕ್ ಆರಂಭಿಸಲು ವಕೀಲರ ಸಂಘ ಮನವಿ

1 HVR 9
Published on

ಹಾವೇರಿ: ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ವಕೀಲರ ಸಂಘಕ್ಕೆ ಅಂಚೆ ಕಚೇರಿ ಹಾಗೂ ಬ್ಯಾಂಕ್ ಶಾಖೆಯೊಂದನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದಿಂದ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಲಾಯಿತು.
ಹುಬ್ಬಳ್ಳಿಯ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಇತ್ತೀಚೆಗೆ ಬೊಮ್ಮಾಯಿ ಅವರನ್ನು ಭೇಟಿಯಾದ ಸಂಘದ ಅಧ್ಯಕ್ಷ ಶಂಭು ಜತ್ತಿ ವಕೀಲರ ಸಂಘದ ನಿರ್ವಹಣೆಗೆ ಅನುದಾನ ಹಾಗೂ ಇತರ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ತುರ್ತಾಗಿ ಅಂಚೆ ಕಚೇರಿ ಹಾಗೂ ಬ್ಯಾಂಕ್ ಶಾಖೆ ಆರಂಭಿಸಲು ಮನವಿ ಪತ್ರದ ಮೂಲಕ ಕೋರಿದರು. ಈ ಕುರಿತು ಅಧಿಕಾರಿಗಳಿಗೆ ಸೂಚಿಸುವುದಾಗಿ ಸಂಸದರು ಭರವಸೆ ನೀಡಿದರು.
ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಸಿ.ಪಿ.ಜಾವಗಲ್ಲ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಮಂಜುನಾಥ ಕುಂಠೆ, ಎನ್.ಪಿ.ಚಾವಡಿ, ಉಮರ್ ರಜಾಕನವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net