ಹಾವೇರಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.23ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಪುರುಷರಿಗೆ ಪುಟ್‌ಬಾಲ್, ಥ್ರೋಬಾಲ್, ಷಟಲ್ ಬ್ಯಾಡ್ಮಿಂಟನ್, ಕುಸ್ತಿ, ಬಾಲ್ ಬ್ಯಾಡ್ಮಿಂಟನ್ ಹಾಗೂ ಮಹಿಳೆಯರಿಗೆ ಥ್ರೋಬಾಲ್, ಷಟಲ್ ಬ್ಯಾಡ್ಮಿಂಟನ್, ಕುಸ್ತಿ, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜರುಗಲಿವೆ.
ಜಿಲ್ಲೆಯ ಏಳು ತಾಲೂಕುಗಳಲ್ಲಿ ಈಗಾಗಲೇ ಸಂಘಟನೆಯಾಗಿರುವ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವಂತಹ ಮಹಿಳಾ ಮತ್ತು ಪುರುಷ ಕ್ರೀಡಾಕೂಟಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ಬೆಳಗ್ಗೆ 9 ಗಂಟೆಯೊಳಗಾಗಿ ಕ್ರೀಡಾಂಗಣಕ್ಕೆ ಆಗಮಿಸಿ ವರದಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.