ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ; 26 ಸಿಬ್ಬಂದಿಯನ್ನು ಕೆಲಸದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ಆಕ್ರೋಶ; ಹಾಲಿ ನೌಕರರು ಪ್ರತಿಭಟನೆಗೆ ಸಾಥ್

24 HVR 2 A
Published on

ಹಾವೇರಿ: ಜಿಲ್ಲಾಸ್ಪತ್ರೆಯ 26 ಹೊರಗುತ್ತಿಗೆ ಸಿಬ್ಬಂದಿಯನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಹೊರಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆ ನೌಕರರು, ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಎಂಟು- ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವವರನ್ನು ಹೆಚ್ಚುವರಿ ಉದ್ಯೋಗದ ನೆಪ ಹೇಳಿ ಏಕಾಏಕಿ ತೆಗೆದು ಹಾಕಿದ್ದಾರೆ. ಇದರಿಂದ ನಮ್ಮ ಕುಟುಂಬಗಳು ಬೀದಿಪಾಲಾಗಿವೆ. ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಯಾಕೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ನೌಕರರನ್ನು ಕೆಲಸಕ್ಕೆ ವಾಪಸ್ ನೇಮಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ಪಟ್ಟು ಹಿಡಿದರು.

ವಿಜಯವಾಣಿ ವಿಸ್ತೃತ ವರದಿ

'ಜಿಲ್ಲಾಸ್ಪತ್ರೆ 26 ಹೊರಗುತ್ತಿಗೆ ಸಿಬ್ಬಂದಿಗೆ ಕತ್ತರಿ' ಶೀರ್ಷಿಕೆಯಡಿ 'ವಿಜಯವಾಣಿ' ಪತ್ರಿಕೆ ನ.24ರಂದು ವಿಶೇಷ ವರದಿ ಪ್ರಕಟಿಸಿತ್ತು. ವರದಿ ಮೂಲಕ ನಮ್ಮ ಸಮಸ್ಯೆ ಬಗ್ಗೆ ಸರ್ಕಾರದ ಬಗ್ಗೆ ಗಮನ ಸೆಳೆದಿದ್ದಕ್ಕೆ ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಸಂಘ ಪತ್ರಿಕೆಗೆ ಧನ್ಯವಾದ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net