ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಟಿಕೆಟ್ ನೀಡಿದ ಸಚಿವ

11 HVR 1 C
Published on

ಹಾವೇರಿ: ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ನೇರವಾಗಿ ಹಾವೇರಿಯಿಂದ ಹುಬ್ಬಳ್ಳಿಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಏರಿದರು. ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಟಿಕೆಟ್ ನೀಡಿದರು. ಬಳಿಕ ಬಸ್‌ಗೆ ಹಸಿರು ನಿಶಾನೆ ತೋರಿಸುವ ಮೂಲಕ ಶುಭ ಕೋರಿದರು. ಮಹಿಳಾ ಪ್ರಯಾಣಿಕರೂ ಕೂಡ ಸಂಭ್ರಮದಿಂದ ಟಿಕೆಟ್ ಪಡೆದು ಸಚಿವರಿಗೆ ಧನ್ಯವಾದ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net