ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಇಂದು

Minister Shivanand Patil
Published on

ಹಾವೇರಿ: ರಾಜ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜು.1ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಇಲ್ಲಿನ ಬಸವೇಶ್ವರ ನಗರದ ಸಿ ಬ್ಲಾಕ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಡಾ.ಮಹದೇವ ಬಣಕಾರ ಸಾಂಸ್ಕೃತಿಕ ಭವನದ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ, ರಾತ್ರಿ ಇಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಜು.2ರಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net