ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ.24ರಿಂದ

Published on

ಹಾವೇರಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ.24ರಿಂದ ನ.27ರವರೆಗೆ ತಾಲೂಕಿನ ಕೆರಿಮತ್ತಿಹಳ್ಳಿ ಬಳಿಯ ಡಿಎಆರ್ ಕವಾಯತು ಮೈದಾನದಲ್ಲಿ ಜರುಗಲಿದೆ.
ನ.24ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ನ.27ರಂದು ಸಂಜೆ 4 ಗಂಟೆಗೆ ಕ್ರೀಡಾಕೂಟ ಮುಕ್ತಾಯ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net