ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ

5 HVR 4
Published on

ಹಾವೇರಿ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಗಣ್ಯರು ಪುಷ್ಪನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕೃಷಿ ಇಲಾಖೆ ಉಪನಿರ್ದೇಶಕ ಹುಲಿರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಶೋಕ ಗದ್ದಿಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್., ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ತೇಜರಾಜ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಾಲಿನಿ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net