ಹಾವೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆ (ಪುಣ್ಯ ಸ್ಮರಣೆ)ಅಂಗವಾಗಿ ಡಿ.6ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.