ನೀರಿನ ಸಮಸ್ಯೆ ಆಲಿಕೆಗೆ ಸಹಾಯವಾಣಿ ಆರಂಭ

6 HVR 3
Published on

ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಆಲಿಸಿ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರ ಸಂಖ್ಯೆ 94837 37129 ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಬಿಡುಗಡೆಗೊಳಿಸಿದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶನದಂತೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 24 ಗಂಟೆ ಕಾರ್ಯನಿರ್ವಹಿಸಲು ಸಹಾಯವಾಣಿ ಆರಂಭಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿಗೆ (9483737129) ಕರೆ ಮಾಡಬಹುದು ಎಂದು ಸಚಿವರು ತಿಳಿಸಿದರು.

ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net