ಡ್ರೋನ್ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಪುರುಷರು 35 ಹಾಗೂ ಮಹಿಳೆಯರು 40 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ಮೂಲ ನಿವಾಸಿ ಮತ್ತು ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯ ಯುವಕ ಮತ್ತು ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಆಸಕ್ತರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಡಿ.12ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾಡಳಿತ ಭವನ ಸಿ ಬ್ಲಾಕ್ ರೂಂ. ನಂ.38 ದೇವಗಿರಿ-ಹಾವೇರಿ, ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net