ಹಾವೇರಿಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ; ಶಾಸಕ ರುದ್ರಪ್ಪ ಲಮಾಣಿಗೆ ಡಿಎಸ್‌ಎಸ್ ಆಗ್ರಹ

Published on

ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ನೂತನ ಶಾಸಕ ರುದ್ರಪ್ಪ ಲಮಾಣಿ ಅವರು ತಕ್ಷಣವೇ ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಾವೇರಿ ಜಿಲ್ಲೆಯಾಗಿ 25 ವರ್ಷ ಕಳೆದರೂ ಜಿಲ್ಲಾ ಕೇಂದ್ರದಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಮರ್ಪಕವಾಗಿ ನೀರು ಪೂರೈಸುವಲ್ಲಿ ನಗರಸಭೆ ವಿಫಲವಾಗಿದೆ. ಕೆಲವೆಡೆ ತಿಂಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ಮಳೆಯ ಅಭಾವದಿಂದ ನದಿಯಲ್ಲಿ ನೀರು ಖಾಲಿಯಾಗಿದ್ದು, ಅಂತರ್ಜಲವೂ ಕುಸಿಯುತ್ತಿದೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ನಗರಸಭೆ ಕಣ್ಮುಚ್ಚಿ ಕುಳಿತಿದೆ. ಕೂಡಲೇ ಶಾಸಕರು ಮಧ್ಯ ಪ್ರವೇಶಿಸಬೇಕು. ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಕನಿಷ್ಠ ನಾಲ್ಕು ದಿನಗಳಿಗೊಮ್ಮೆ ನೀರು ಪೂರೈಸಬೇಕು. ನುಡಿದಂತೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net