ಚುನಾವಣಾ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ; ತಾಪಂ ಇಒ ಭರತ ಹೆಗಡೆ ಕರೆ

28 HVR 4 A
Published on

ಹಾವೇರಿ: ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬ ಮತದಾರರೂ ತಪ್ಪದೇ ಮತದಾನ ಮಾಡುವ ಮೂಲಕ ಈ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ ಹೆಗಡೆ ಹೇಳಿದರು.
ತಾಲೂಕು ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಗಾಂಧಿಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯವಾಗಿದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಟಿ.ಪಾಟೀಲ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಮಿತಾ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net