ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ; 5.10 ಲಕ್ಷ ರೂ. ವಶಕ್ಕೆ

Published on

ಹಾವೇರಿ: ರಟ್ಟೀಹಳ್ಳಿ ಪಟ್ಟಣದ ಕಾಂಗ್ರೆಸ್ ಮುಖಂಡ ರವಿ ಮುದಿಯಪ್ಪನವರ ಮನೆ ಮೇಲೆ ಸೋಮವಾರ ತಡರಾತ್ರಿ ಚುನಾವಣಾ ಅಧಿಕಾರಿಗಳ ತಂಡ ದಾಳಿ ನಡೆಸಿ, 5.10 ಲಕ್ಷ ರೂ. ವಶಪಡಿಸಿಕೊಂಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮುದಿಯಪ್ಪನವರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ಕೋರಿ ಮತದಾರರಿಗೆ ಹಣ ಹಂಚಲು ಮುಂದಾಗಿದ್ದ ವಿಷಯ ತಿಳಿದು ಚುನಾವಣಾ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮನೆಯಲ್ಲಿದ್ದ ಹಣ ವಶಪಡಿಸಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಪ್ರಸನ್ನಕುಮಾರ ಜಾಜಯ್ಯ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net