ಮಿನಿ ಉದ್ಯೋಗ ಮೇಳ 23ರಂದು

emplement mela
Published on

ಹಾವೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂ. 23ರಂದು ಬೆಳಗ್ಗೆ 11 ಗಂಟೆಗೆ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಸೇರಿ ಯಾವುದೇ ಪದವಿ ಹಾಗೂ ಸ್ನಾತಕೋತರ ಪದವಿ ಹೊಂದಿದ 18ರಿಂದ 35 ವರ್ಷ ವಯಸ್ಸಿನ ಉದ್ಯೋಗಾಕಾಂಕ್ಷಿ ಯುವಕ, ಯುವತಿಯರು ಭಾಗವಹಿಸಬಹುದು. ಕನಿಷ್ಠ 5 ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಜರಾಕ್ಸ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದ ದಿನದಂದು ಕಡ್ಡಾಯವಾಗಿ ನೋಂದಾಯಿಸಿಕೊಂಡು ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net