

ಹಾವೇರಿ: ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ತಮ್ಮ 64ನೇ ಜನ್ಮದಿನದ ಅಂಗವಾಗಿ ಜ.28ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಶಿಗ್ಗಾಂವಿ ಫಿನಿಕ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನ್ಮದಿನದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಹಾವೇರಿಯ ಗಾಂಧಿ ಸರ್ಕಲ್ ನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಬೊಮ್ಮಾಯಿ ಭಾಗವಹಿಸುವರು. 50ಕ್ಕೂ ಅಧಿಕ ಪೌರ ಕಾರ್ಮಿಕರನ್ನು ಸನ್ಮಾನಿಸುವರು. 11.30ಕ್ಕೆ ಹಾವೇರಿಯ ಜ್ಯೋತಿ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸವಣೂರಿನ ದೊಡ್ಡ ಹುಣಸೆ ಮಠದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸುವರು. ಮಧ್ಯಾಹ್ನ 3.30ಕ್ಕೆ ಸವಣೂರಿನ ಅಡವಿಸ್ವಾಮಿ ಮಠಕ್ಕೆ ಭೇಟಿ ಕೊಡುವರು. ಸಂಜೆ 4.30ಕ್ಕೆ ಬಂಕಾಪುರದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಶಿಗ್ಗಾಂವಿಯ ಸಂತೆ ಮೈದಾನದಲ್ಲಿ ಜನ್ಮದಿನದ ನಿಮಿತ್ತ ಆಯೋಜಿಸಿರುವ ‘ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಜರುಗಲಿರುವ ‘ಸಾಂಸ್ಕೃತಿಕ ವೈಭವ’ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ವಿಶೇಷ ಚೇತನರ ಶಾಲೆಗೆ ಭೇಟಿ :
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ.28ರಂದು ಬೆಳಗ್ಗೆ 11.30ಕ್ಕೆ ಇಲ್ಲಿನ ಇಜಾರಿ ಲಕಮಾಪುರದ ಜ್ಯೋತಿ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಮಕ್ಕಳೊಂದಿಗೆ ತಮ್ಮ 64ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.