ಅಬಕಾರಿ ಇಲಾಖೆಯಿಂದ ಕಂಟ್ರೋಲ್ ರೂಂ ಆರಂಭ

Published on

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ಚುನಾವಣೆ ಪ್ರಕ್ರಿಯೆಗಳನ್ನು ನ್ಯಾಯಯುತ, ಶಾಂತಿಯುತವಾಗಿ ನಡೆಸಲು ಹಾಗೂ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಉಚಿತ ಸಹಾಯವಾಣಿ 1800-425-0662 ಹಾಗೂ ಹಾವೇರಿ ಉಪ ವಿಭಾಗ ಕಚೇರಿಯ ದೂರವಾಣಿ ಸಂಖ್ಯೆ 08375-232902 ಸ್ಥಾಪಿಸಲಾಗಿದೆ.

ಕಂಟ್ರೋಲ್ ರೂಂ ನಿರ್ವಹಣೆಗೆ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಅಬಕಾರಿ ಮುಖ್ಯ ಪೇದೆಗಳಾದ ಎನ್.ಕೆ.ಕಿಲ್ಲೇದಾರ ಹಾಗೂ ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಡಿ.ಎನ್.ನರಗುಂದ ನೇಮಕ ಮಾಡಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net