

ಹಾವೇರಿ: ರಾಜ್ಯ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023-24 ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಲು ಸೆ.30 ಕೊನೆಯ ದಿನವಾಗಿದೆ.
ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ಅಕ್ಷೇಪಣೆಗಳನ್ನು ಸಲ್ಲಿಸಲು ರೈತರಿಗೆ ಸಲ್ಲಿಸಲು ಅ.10ರವರೆಗೆ ಅವಕಾಶವಿದೆ. ಬೆಳೆ ಮಾಹಿತಿ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ಬೆಳೆ ಸಮೀಕ್ಷೆ ದತ್ತಾಂಶ ಆಧರಿಸಿ ಮುಂದಿನ ದಿನಗಳಲ್ಲಿ ಬೆಳೆವಿಮೆಗೆ ಸಂಬಂಧಿಸಿದ ಮಿಸ್‌ಮ್ಯಾಚ್ ಪ್ರಕರಣಗಳ ಇತ್ಯರ್ಥ, ಬೆಂಬಲ-ಬೆಲೆಯಡಿ ರೈತರು ಮಾರಾಟ ಮಾಡಲು, ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ಬಳಕೆ ಮಾಡಲಾಗುವುದು.
ಆದ್ದರಿಂದ ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೇ ಇದರಲ್ಲಿ ಪಾಲ್ಗೊಂಡು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತರಿ ಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆಗಳನ್ನು ಸೆ.10ರ ಒಳಗಾಗಿ ಸಲ್ಲಿಸಲು ಅವಕಾಶವಿದೆ. ನಂತರದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.