ಫಾಸ್ಟ್‌ಫುಡ್ ಸ್ಟಾಲ್ ಉದ್ಯಮಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಪಾನಿಪುರಿ, ಏಗ್‌ರೈಸ್, ನೂಡಲ್ಸ್, ಗೋಬಿ ಮಂಚೂರಿ, ಬ್ರೆಡ್, ಕೇಕ್ ತಯಾರಿಕೆ ತರಬೇತಿ

Fastfood panipuri
Published on

ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ 10 ದಿನಗಳ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿ ಆಯೋಜಿಸಲಾಗಿದೆ. ಪಾನಿಪುರಿ, ಸೇವಪುರಿ, ದಹಿಪುರಿ, ಏಗ್‌ರೈಸ್, ನೂಡಲ್ಸ್, ಗೋಬಿ ಮಂಚೂರಿ, ಪಾವಬಾಜಿ, ವಡಾ ಪಾವ್, ಬ್ರೆಡ್, ಕೇಕ್ ಇತ್ಯಾದಿ ತಯಾರಿಕೆ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಜಿಲ್ಲೆಯ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ತರಬೇತಿಗೆ ಅವಕಾಶವಿದೆ. ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ರೇಷನ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಮೇ25ರೊಳಗಾಗಿ ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ. ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ ಹಾವೇರಿ (ಮೊ.ಸಂ.9611645907) ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net