ಅಗತ್ಯ ಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಕ್ರಮ; ಸಂಸದ ಬಸವರಾಜ ಬೊಮ್ಮಾಯಿ ಪತ್ರಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

Former
Published on

ಹಾವೇರಿ: ಜಿಲ್ಲೆಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿರುವುದಾಗಿ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ.
ಮುಂಗಾರು ಮಳೆ ಆರಂಭವಾದ ಹಿನ್ನೆಲೆಯಲ್ಲಿ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ಧರಾಗಿದ್ದಾರೆ. ಆದರೆ, ಜಿಲ್ಲೆಯಲ್ಲಿ ಬೇಡಿಕೆಗಿಂತ ಗೊಬ್ಬರ ಕಡಿಮೆ ಇದ್ದು, ನೂಕು-ನುಗ್ಗಲು ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಗೆ ಸುಮಾರು 35,000 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನಲ್ಲಿ ಡಿ.ಎ.ಪಿ.ಗೊಬ್ಬರದ ಅವಶ್ಯಕತೆ ಇದ್ದು, ಕೇವಲ 6,500 ಮೆಟ್ರಿಕ್ ಟನ್ ಮಾತ್ರ ಸರಬರಾಜಾಗಿದೆ. ಬಾಕಿ ಇರುವ 29,000 ಮೆಟ್ರಿಕ ಟನ್ ಗೊಬ್ಬರವನ್ನು ಜಿಲ್ಲೆಗೆ ಸರಬರಾಜು ಮಾಡಬೇಕಿದೆ. ಯೂರಿಯಾ 65,000 ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 38,000 ಮೆಟ್ರಿಕ್ ಟನ್ ಸರಬರಾಜು ಮಾಡಲು ಕ್ರಮ ಜರುಗಿಸುವಂತೆ ಮೇ 22ರಂದು ಬಸವರಾಜ ಬೊಮ್ಮಾಯಿ, ಕೃಷಿ ಸಚಿವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ಪತ್ರದ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net