ಹಾವೇರಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025, ಅರ್ಹತಾ ದಿನಾಂಕ: 01-01-2025ಕ್ಕೆ ಸಂಬಂಧಿಸಿದಂತೆ ದಿನಾಂಕ: 27-11-2024ರಂದು ಹಾವೇರಿ ಜಿಲ್ಲೆಯ 83-ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಪ್ರಸ್ತುತ ಭಾರತ ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 06-01-2025ರಂದು ಪ್ರಕಟಿಸಲು ವೇಳಾಪಟ್ಟಿಯನ್ನು ಹೊರಡಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಜಿಲ್ಲೆಯಾದ್ಯಂತ ದಿನಾಂಕ: 06-01-2025ರಂದು ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಸೀಲ್ದಾರ್, ಉಪ ವಿಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಯವರ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.