ನವೀಕರಣಗೊಳ್ಳದ ಲೇವಾದೇವಿ ಸಂಸ್ಥೆಗಳ ಪರವಾನಗಿ ರದ್ದು

Published on

ಹಾವೇರಿ: ಪರವಾನಗಿ ಪಡೆದ ಲೇವಾದೇವಿಗಾರರು, ಗಿರವಿದಾರರು, ಹಣಕಾಸು ಸಂಸ್ಥೆಗಳು ಪ್ರತಿ ಐದು ವರ್ಷಕ್ಕೊಮ್ಮೆ ನವೀಕರಣಗೊಳಿಸುವುದು ಕಡ್ಡಾಯವಾಗಿದೆ. ಜಿಲ್ಲೆಯ ಕೆಲವು ಸಂಸ್ಥೆಗಳು 2024ರ ಮಾರ್ಚ್ 31ರೊಳಗಾಗಿ ನವೀಕರಿಸದೇ ಇರುವ ಸಂಸ್ಥೆಗಳ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಲೇವಾದೇವಿಗಾರರ ನಿಬಂಧಕರು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಜಿಲ್ಲೆಯ ಏಳು ಸಂಸ್ಥೆಗಳು ನವೀಕರಿಸದ ಕಾರಣ ಭದ್ರತಾ ಠೇವಣಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡು ಅವರ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಸವಣೂರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಮೂಲಕ ಸಂಬಂಧಪಟ್ಟ ಸಂಸ್ಥೆಗಳ ಮಾಲೀಕರ ಗಮನಕ್ಕೆ ತಂದಿದ್ದಾರೆ. ಈ ಸಂಸ್ಥೆಯವರು 15 ದಿನದೊಳಗಾಗಿ ತಮ್ಮ ಆಕ್ಷೇಪಣೆ ಏನಾದರೂ ಇದ್ದಲ್ಲಿ ಸಲ್ಲಿಸಬೇಕು. ತಪ್ಪಿದಲ್ಲಿ ಸಂಸ್ಥೆಗಳನ್ನು ರದ್ದುಪಡಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೂಡಲೇ ಲೇವಾದೇವಿಗಾರರ ನಿಬಂಧಕರು ಹಾಗೂ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ, ಹಾವೇರಿ ಈ ವಿಳಾಸದಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net