ಹಾವೇರಿ ಮೀನು, ಮಾಂಸ ಮಾರಾಟ ನಿಷೇಧ ಅ.2ರಂದು

Published on

ಹಾವೇರಿ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅ.2ರಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮೀನು, ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹಾವೇರಿ ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ತಿಳಿಸಿದ್ದಾರೆ.
ಅಂದು ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು. ತಪ್ಪಿದಲ್ಲಿ ಅಂಗಡಿಯವರ ಉದ್ದಿಮೆ ಪರವಾನಿಗೆ ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net